ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ, ಆರ್ಥಿಕ ಇಲಾಖೆಯ ಸಭೆ

Uncategorized

“ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಸಭೆ ನಡೆಸಿ, ಸಮಸ್ಯೆಗಳ ಕುರಿತು ಮಾಹಿತಿ ಪಡೆದು ತ್ವರಿತವಾಗಿ ಬಗೆಹರಿಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸರಕಾರದ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಶ್ರೀಮತಿ ಉಮಾ, ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಶ್ರೀ ಕುಮಾರ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತ್ ಮೂರ್ತಿ ಉಪಸ್ಥಿತರಿದ್ದರು.