ಮೂರು ಕೋಟಿ ರು. ಗಳ ವೆಚ್ಚದಲ್ಲಿ ಶಿವಮೊಗ್ಗದ ಗಾಂಧೀನಗರದಲ್ಲಿ ನೂತನವಾಗಿ ನಿರ್ಮಿಸಲಾದ 15 ಮಳಿಗೆಗಳ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Uncategorized ಶಿವಮೊಗ್ಗ

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯು ಉದ್ಯಮನಿಧಿ ಯೋಜನೆ ಯಡಿಯಲ್ಲಿ ಮೂರು ಕೋಟಿ ರು. ಗಳ ವೆಚ್ಚದಲ್ಲಿ ಶಿವಮೊಗ್ಗದ ಗಾಂಧೀನಗರದಲ್ಲಿ ನೂತನವಾಗಿ ನಿರ್ಮಿಸಲಾದ 15 ಮಳಿಗೆಗಳ ವಾಣಿಜ್ಯ ಸಂಕೀರ್ಣವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾರ್ಪೋರೇಟರ್ ನಾಗರಾಜ್ ಕಂಕಾರಿ, ಎಚ್ರಾ. ಪಾಲಕ್ಷಿ,  ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಭೂಪಾಲ್, ಪಾಲಿಕೆ ಆಯುಕ್ತ ಶ್ರೀಮತಿ ಕವಿತಾ ಯೋಗಪ್ಪನವರ, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.