ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ 2025 ಶಿಕ್ಷಕರಾದ ಹಸನ್ ಸಾಬ್ ಕೆ. ಹೆಚ್. ಇವರಿಗೆ ಈ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿರುತ್ತಾರೆ. ಇವರು ಸರ್ಕಾರಿ ಪದವಿ ಪೂರ್ವ ಕಾಲೇಜ್ ಆಯನೂರು (ಪ್ರೌಢಶಾಲೆ) ಶಿವಮೊಗ್ಗ ಇಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಒಟ್ಟು 36 ವರ್ಷಗಳ ಉಪಯುಕ್ತ ಸೇವೆ ಸಲ್ಲಿಸಿರುತ್ತಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇಲಾಖೆಯ ಯೋಜನೆಗಳನ್ನು ಶೈಕ್ಷಣಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣವಾಗಿ ಸಹ ಭಾಗಿಯಾಗಿರುತ್ತಾರೆ.
ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ (ಸಿಆರ್ಪಿ ಬಿ. ಆರ್ ಪಿ. ಇ ಸಿ ಓ) ಹುದ್ದೆಗಳಿಗ ಈ ಎಲ್ಲ ಹುದ್ದೆಗಳಿಗೂ ಕೆಲಸಗಳ ಮೂಲಕ ಜೀವ ತುಂಬಿರುತ್ತಾರೆ. ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಿರುತ್ತಾರೆ. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಮಕ್ಕಳನ್ನು ತರಬೇತಿ ನೀಡಿ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಮಾರ್ಗದರ್ಶನ ನೀಡಿರುತ್ತಾರೆ. ರಾಜ್ಯಮಟ್ಟದ ಹಲವಾರು ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಾರೆ.
ಅಲ್ಲದೆ ರಾಜ್ಯಮಟ್ಟದ ಶಿಕ್ಷಕರ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸಿರುತ್ತಾರೆ. ಹೀಗೆ ಬಹುಮುಖ ಪ್ರತಿಭೆಯ ಶಿಕ್ಷಕರಾದ ಕೆ ಎಚ್. ಹಸನ್ ಸಾಬ್ ಇವರಿಗೆ ಇಲಾಖೆ ಈ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವ ನೀಡಿದೆ. ಮಲೆನಾಡಿನ ಹೆಮ್ಮೆಯ ಸಾಹಿತಿಯಾದ ಇವರು ಮಕ್ಕಳಿಗಾಗಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಸಂದ ಪ್ರಶಸ್ತಿಯು ಜಿಲ್ಲೆಯ ಸಮಸ್ತ ಶಿಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

