ಮಹಿಳೆ ಸ್ವತಂತ್ರವಾಗಿ ಆರ್ಥಿಕವಾಗಿ ಸಬಲರಾದಾಗ ಅವಳಿಗೆ ಗೌರವ ಹೆಚ್ಚಾಗುತ್ತದೆ. ಇದಕ್ಕೆ ಕುಟುಂಬದ ಸಹಕಾರ ಅತ್ಯಗತ್ಯ.ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ತಿಳಿಸಿದ್ದಾರೆ.
ಅವರಿಂದು ನಗರದ ನೆಹರು ಕ್ರೀಡಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರ 77ನೇ ಜನ್ಮದಿನಾಚರಣೆ ಅಂಗವಾಗಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ನ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
