ಅಪಘಾತ: ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವ ಮಧು ಬಂಗಾರಪ್ಪ

ರಾಜ್ಯ ಶಿವಮೊಗ್ಗ

ಅಪಘಾತ: ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವ ಮಧು

ಬಂಗಾರಪ್ಪ..
ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು.
ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸಪತ್ರೆಗೆ ಕಳಿಸಿದರು.
ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.