ಅಭಿನಯ ಸರಸ್ವತಿ’ ಖ್ಯಾತಿಯ ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ

ರಾಜ್ಯ ರಾಷ್ಟ್ರೀಯ
*ಅಭಿನಯ ಸರಸ್ವತಿ’ ಖ್ಯಾತಿಯ ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ*
ಬಿ ಸರೋಜಾದೇವಿ
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯಲ್ಲಿ ಒಬ್ಬರು. ಅವರನ್ನು ‘ಅಭಿನಯ ಸರಸ್ವತಿ’ ಎಂದೇ ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.
1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಇವರ ಕಲಾಸೇವೆಗೆ 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ತಮಿಳುನಾಡಿನ ಕಲೈಮಾಮಣಿ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.