“ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಜ್ಞಾನ ವಿಸ್ತಾರ “

Education ರಾಜ್ಯ ಶಿವಮೊಗ್ಗ

“ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಜ್ಞಾನ ವಿಸ್ತಾರ “

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು.ಇದರಿಂದ ಅವರ ಜ್ಞಾನ ವಿಸ್ತಾರವಾಗುತ್ತದೆ ಎಂದು ವಿಕಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ A J ರಾಮಚಂದ್ರ ಹೇಳಿದರು. ಆಲ್ಕೋಳ ವಿಕಾಸ ಶಾಲೆಯಲ್ಲಿ ಏರ್ಪಡಿಸಿದ್ದ ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಅಂಕ ಗಳಿಕೆಯ ಜೊತೆಗೆ ಇತರೆ ಸೃಜನಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಅವರ ಭೌದ್ಧಿಕ ಸಾಮರ್ಥ್ಯ ಮತ್ತಷ್ಟು ಹೆಚ್ಚುತ್ತದೆ ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪಾಲಕರು ಸಕಾರಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಗಾಡಿಕೊಪ್ಪ ಕ್ಲಸ್ಟರ್ ಸಿ ಆರ್ ಪಿ ಯಾದ MP ಮಂಜುನಾಥ್ ಮಾತನಾಡಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ದ ಔಚಿತ್ಯವನ್ನು ವಿವರಿಸಿದರು. ಮಕ್ಕಳು ಇದನ್ನು ಸ್ಪರ್ಧೆಯ ದೃಷ್ಟಿಯಿಂದ ಪರಿಗಣಿಸಬೇಕು ,ಯಾವುದೇ ಸ್ಪರ್ಧೆಯಲ್ಲಿ ಬಹುಮಾನಕ್ಕಿಂತ ಭಾಗವಹಿಸುವಿಕೆ ಮುಖ್ಯ ಎಂದರು.ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಹಿರಿಯ ಉಪಾಧ್ಯಕ್ಷರಾದ ಎಂ.ರವಿ, ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಆರ್ ಗಿರೀಶ್, ವಿಕಾಸ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲಕೃಷ್ಣ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಗಾಯತ್ರಿ ಹೆಗಡೆ ಉಪಸ್ತಿತರಿದ್ದರು.ಸುಮಾರು 30 ಶಾಲೆಗಳಿಂದ 600 ಕ್ಕೂ ಹೆಚ್ಚು ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.