ಆಕ್ಸ್ ಫರ್ಡ್ ಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಮತ್ತು ಜಾಗೃತಿ…
ಆಕ್ಸ್ ಫರ್ಡ್ ಶಾಲೆಯ ವತಿಯಿಂದ, ರೋಟರಿ ಇನ್ನರ್ ವೀಲ್ ಶಿವಮೊಗ್ಗ ರಿವರ್ ಸೈಡ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಆಕ್ಸ್ ಫರ್ಡ್ ಶಾಲೆಯ ಮಕ್ಕಳಿಗೆ ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಮತ್ತು ಜಾಗೃತಿಯನ್ನು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೋಟರಿ ಇನ್ನರ್ ವೀಲ್ ಶಿವಮೊಗ್ಗ ರಿವರ್ ಸೈಡನ ಅಧ್ಯಕ್ಷರಾದ ಶೀಲಾ ಸುರೇಶ್, ಸಂಪನ್ಮೂಲ ವ್ಯಕ್ತಿಯಾಗಿ ರೇಖಾ ಎಂ. ಜಿ.ರವರು ಮಕ್ಕಳ ಹಕ್ಕುಗಳು ಬಗ್ಗೆ ಹಾಗೂ ಪೋಕ್ಸೋ ಕಾಯಿದೆಯ ಬಗ್ಗೆ ನಮ್ಮ ಶಾಲೆಯ ಮಕ್ಕಳಿಗೇ ಸಮಗ್ರ ಮಾಹಿತಿಯನ್ನು ನೀಡಿದರು. ಪೊಲೀಸ್ ಇಲಾಖೆಯ ವತಿಯಿಂದ ಭಾಗವಸಿದ್ದ ಪ್ರಸನ್ನ ಕುಮಾರ್ , ASI ರವರು ಪೊಲೀಸ್ ಇಲಾಖೆಯು ಮಕ್ಕಳ ಸ್ನೇಹಿಯಾಗಿದ್ದು ಮಕ್ಕಳು ನಿರ್ಭೀತವಾಗಿ ತಮ್ಮ ಸುತ್ತಲೂ ನಡೆಯುವ ಅಪರಾಧಗಳನ್ನು ಇಲಾಖೆಯ ಗಮನಕ್ಕೆ ತಂದಲ್ಲಿ ಅಪರಾಧ ಮುಕ್ತ ಸಮಾಜದ ನಿರ್ಮಾಣವನ್ನು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಮಕ್ಕಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

