ನಾಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಂದ ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ವೆಬ್ಸೈಟ್ ಉದ್ಘಾಟನೆ …

ರಾಜ್ಯ ಶಿವಮೊಗ್ಗ

ನಾಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಂದ ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ವೆಬ್ಸೈಟ್ ಉದ್ಘಾಟನೆ …

ಶಿವಮೊಗ್ಗ : ಕಾರ್ಮಿಕ ಸಚಿವ ಸಂತೋಷ್ ಲಾಡ್ ನಾಳೆ ಮಾರ್ಚ್ -15 ರಂದು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದು, ಕುವೆಂಪು ರಂಗ ಮಂದಿರದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ವೆಬ್ಸೈಟ್ ಉದ್ಘಾಟನೆ ಹಾಗೂ ಸಮಾಜದ ಹಿರಿಯ ಮುಖಂಡರಿಗೆ ಸನ್ಮಾನಿಸಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ಗೌರವಧ್ಯಕರಾದ ಎಂ. ಪ್ರವೀಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

ಕಾರ್ಯಕ್ರಮಕ್ಕೂ ಮುನ್ನ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮಹಾವೀರ ವೃತ್ತದಿಂದ ಮೆರವಣಿಗೆ ಮೂಲಕ ಕುವೆಂಪು ರಂಗ ಮಂದಿರಕ್ಕೆ ಕರೆ ತರಲಾಗುವುದು, ಈ ಕಾರ್ಯಕ್ರಮಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಮುಖಂಡರು. ಜನ ಪ್ರತಿನಿಧಿಗಳು ಭಾವಹಿಸಲಿದ್ದಾರೆ ಎಂದರು