ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಜನ ಸೇವಕ, ಸ್ನೇಹಜೀವಿ ಎಂ. ಶ್ರೀಕಾಂತ್ ಅವರನ್ನು ಕೊನೆಗೂ ಅವರ ಆಪ್ತ ವಲಯ ಕೈ ಹಿಡಿದಿದೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಅಪೆಕ್ಸ್ ಬ್ಯಾಂಕಿನ ಪ್ರತಿನಿಧಿ ಯನ್ನಾಗಿ ನಾಮನಿರ್ದೇಶನಮಾಡಲಾಗಿದೆ. ಈ ಸಂಬಂಧ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಈ ಆದೇಶ ಪತ್ರ ರವಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಆ. 15 ರ ಸ್ವಾತಂತ್ರೋತ್ಸವದ ದಿನದಂದು ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಆವರಣದಲ್ಲಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ, ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಅವರು ಶ್ರೀಕಾಂತ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.



