ವೇಗದ ಶತಕ: ವಿರಾಟ್ ಕೊಹ್ಲಿ ದಾಖಲೆ ಮುರಿದ ಸ್ಮೃತಿ ಮಂದಾನ

ರಾಜ್ಯ ರಾಷ್ಟ್ರೀಯ
ವೇಗದ ಶತಕ: ವಿರಾಟ್ ಕೊಹ್ಲಿ ದಾಖಲೆ ಮುರಿದ ಸ್ಮೃತಿ ಮಂದಾನ
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಭರ್ಜರಿ ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾ ಭಾರತಕ್ಕೆ 413 ರನ್‌ಗಳ ಗುರಿಯನ್ನು ನೀಡಿದ್ದು ಮಂಧಾನಾ ಬ್ಯಾಟಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡಿದರು.
ಪಂದ್ಯದ ಆರಂಭದಿಂದಲೂ ಮಂಧಾನಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತಿಮವಾಗಿ 125 ರನ್ ಬಾರಿಸಿ ಔಟಾದರು. ಇನ್ನು ಮಂಧಾನಾ ಏಕದಿನ ಪಂದ್ಯಗಳಲ್ಲಿ ಶತಕ ಗಳಿಸಿದ ಅತ್ಯಂತ ವೇಗದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಲ್ಲದೆ, ಮಂಧಾನಾ ಅವರ ಶತಕವು ಮಹಿಳಾ ಕ್ರಿಕೆಟ್‌ನಲ್ಲಿ ಎರಡನೇ ಅತ್ಯಂತ ವೇಗದ ಶತಕವಾಗಿದೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕವು ಆಸ್ಟ್ರೇಲಿಯಾದ ಮೇಗ್ ಲ್ಯಾನಿಂಗ್ ಅವರ ಹೆಸರಿನಲ್ಲಿದ್ದು 45 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಮಂಧಾನ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ 70 ಎಸೆತಗಳಲ್ಲಿ ಶತಕ ಬಾರಿಸಿ ಭಾರತದ ಪರ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದರು.

 

ಇದರೊಂದಿಗೆ, ಮಂಧಾನ ಪುರುಷ ಮತ್ತು ಮಹಿಳಾ ಕ್ರಿಕೆಟ್ ಎರಡರಲ್ಲೂ ಭಾರತದ ಪರ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಮುರಿದಿದ್ದಾರೆ. ಇದಕ್ಕೂ ಮೊದಲು, ಆಸ್ಟ್ರೇಲಿಯಾ ವಿರುದ್ಧ 52 ಎಸೆತಗಳಲ್ಲಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಹೊಂದಿದ್ದರು. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಸತತ ಎರಡು ಶತಕಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಕೂಡ ಮಂಧಾನ. ಎರಡನೇ ಏಕದಿನ ಪಂದ್ಯದಲ್ಲಿಯೂ ಮಂಧಾನ ಶತಕ ಗಳಿಸಿದರು. ಹಿಂದಿನ ದಾಖಲೆ ಟ್ಯಾಮಿ ಬ್ಯೂಮಾಂಟ್