ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ {94}ವಿಧಿವಶ
ಕನ್ನಡದ ಖ್ಯಾತ ಬರಹಗಾರ ಇನ್ನಿಲ್ಲ… ಪದ್ಮಭೂಷಣ ಪ್ರಶಸ್ತಿ ವಿಜೇತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಂದು ಕನ್ನಡಿಗರನ್ನು ಬಿಟ್ಟು ಹೋಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಆಸ್ಪತ್ರೆಯಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಕೊನೆಯುಸಿರು ಎಳೆದಿದ್ದಾರೆ. ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಹೀಗಾಗಿಯೇ ಕಳೆದ 3 ತಿಂಗಳಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅವರೀಗ ಚಿಕಿತ್ಸೆ ಫಲಿಸದೆ ತಮ್ಮ 94ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸುದ್ದಿ ಕನ್ನಡ ಸಾಹಿತ್ಯ ಲೋಕದಲ್ಲಿ ಮಾತ್ರವಲ್ಲ ಇಡೀ ಕರ್ನಾಟಕದಲ್ಲಿ ನೋವಿನ ವಾತಾವರಣ ಸೃಷ್ಟಿಸಿದೆ.
