ತಾರಾ.ಜಿ. ಪ್ರಥಮ ಸ್ಥಾನ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

ರಾಜ್ಯ ಶಿವಮೊಗ್ಗ

ಶಿವಮೊಗ್ಗ: ನಗರದ ನ್ಯಾಷನಲ್ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ. ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ  ಗಾಜನೂರಿನ 10ನೇ ತರಗತಿಯ ತಾರಾ.ಜಿ. ಇವರು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದವು ಮತ್ತು ಶಾಲಾ ಸಹಪಾಠಿಗಳು ಅಭಿನಂದನೆ ಸಲ್ಲಿಸಿ ರಾಜ್ಯ ಮಟ್ಟದಲ್ಲಿ ನಮ್ಮ ಶಿವಮೊಗ್ಗದ ತಾರ ರವರು ಒಳ್ಳೆಯ ಹೆಸರನ್ನು ಗಳಿಸಲಿ ಎಂದು ಶುಭ: ಕೋರಿದ್ದಾರೆ.