ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಂದ ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಸಂಘದ ವೆಬ್ಸೈಟ್ ಉದ್ಘಾಟನೆ
ಹಿಂದೂ ಧರ್ಮ ಉಳಿಸುವಲ್ಲಿ ಮರಾಠ ಸಮಾಜದ ಕೊಡುಗೆ ಅಪಾರ
ಶಿವಮೊಗ್ಗ : ಸನಾತನ ಹಿಂದೂ ಧರ್ಮವನ್ನು ಉಳಿಸುವಲ್ಲಿ ಮರಾಠ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಅವರು ಇಂದು ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸೇವಾ ಸಂಘ ಆಯೋಜಿಸಿದ್ದ ಮರಾಠ ಸಮಾಜದ ವೆಬ್‌ಸೈಟ್ ಲಾಂಚ್ ಹಾಗೂ ಸಮಾಜದ ಹಿರಿಯ ಮುಖಂಡರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ವೆಬ್‌ಸೈಟ್ ಬಿಡುಗಡೆ ಮಾಡಿ ಮಾತನಾ ಡಿದರು.

