ಹಬ್ಬಕ್ಕೆ ಭರ್ಜರಿ ಸಿದ್ಧತೆ, ಮಾರುಕಟ್ಟೆ ಹೌಸ್‌ಫುಲ್
ಶಿವಮೊಗ್ಗ, ಆ.೨೫: ಗೌಲಿ, ಗಣೇಶ ಹಬ್ಬಕ ನಗರದೆಲ್ಲೆಡೆ ಸಂಭ್ರಮದ ಸಿದ್ಧತೆ ನಡೆದಿದೆ. ಗಣೇಶನ ಆಗಮನಕ್ಕೆ ಭರ್ಜ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಅಗತ್ಯ ವಸ್ತುಗಳ ಬೆಲೆ ಏಲಿಕೆ ನಡುವೆಯೂ ನಡುವೆಯೂ, ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನ ತಯಾರಿ ನಡೆಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯ ಜನಸಂದಣಿ ಎಂದಿಗಿಂತ ಹೆಚ್ಚಾಗಿತ್ತು. ಜನ ಹಬ್ಬಕ್ಕೆ ಬೇಕಾದ ಸಾಮಾಗ್ರಿಯನ್ನು ಕೊಂಡುಕೊಳ್ಳುತ್ತಿದ್ದರು.

ಶಿವಮೊಗ್ಗ ನಗರದ ಪ್ರಮುಖ ವ್ಯಾಪಾರ ಸ್ಥಳಗಳಾದ ಗಾಂಧಿ ಬಜಾರ್, ನೆಹರು ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ, ಬಿ.ಹೆಚ್. ರಸ್ತೆಯಲ್ಲಿ ಜನಸಂಚಾರ ಅಲ್ಲಿ ಕವಾಗಿತ್ತು. ಹೂ, ಹಣ್ಣು ಮತ್ತು ಪೂಜಾ ಸಾಮಾಗ್ರಿಗಳನ್ನು ಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ದಿನಸಿ ಅಂಗಡಿ, ಬಟ್ಟೆ ಅಂಗಡಿಗಳಲ್ಲಿ ಭರ್ಜರಿ ವ್ಯಾಪಾರ ಕಂಡುಬಂದಿತು.

ದಿನಸಿ ಅಂಗಡಿ, ಬಟ್ಟೆ ಅಂಗಡಿಗಳಲ್ಲಿ ಭರ್ಜರಿ ವ್ಯಾಪಾರ ಕಂಡುಬಂದಿತು. ಪ್ರತಿ ಬಡಾವಣೆಗಳಲ್ಲೂ ಗಣಪತಿ ಪ್ರತಿಷ್ಠಾಪನೆಗೆ ತಯಾರಿ ನಡೆಯುತ್ತಿದೆ. ಮನೆಗಳಲ್ಲೂ ಕೂಡ ಗಣೇಶ ಮತ್ತು ಗೌರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಟಪ ನಿರ್ಮಿಸಲಾಗಿದೆ. ಜೊತೆಗೆ ಚಕ್ಕಲಿ, ಕೋಡುಬಳೆ, ಕಡುಬು, ಉಂಡೆಗಳು, ಸಿಹಿ ತಿನಿಸುಗಳ ತಯಾರಿ ಕೂಡ ಭರ್ಜರಿಯಾಗಿಯೇ ನಡೆದಿದೆ.
ಈ ಬಾರಿ ಹಬ್ಬದ ಹಿನ್ನೆಲೆಯಲ್ಲಿ ತರಕಾರಿ, ಹಣ್ಣು, ಹೂಗಳ ಬೆಲೆಯಲ್ಲಿ ಅಂತಹ ವ್ಯತ್ಯಾಸವೇನೂ ಇರಲಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ದೂರದ ಊರುಗಳಲ್ಲಿ ನೆಲೆಸಿರುವ ಸ್ಥಳೀಯರು ಊಲಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ರೈಲು, ಬಸ್ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ.
ಹೀಗಾಗಿ ಗಾಂಧಿ ಬಜಾರ್ ಭಾಗದಲ್ಲಿ ಭಾಲೀ ಜನದಟ್ಟಣೆ ಕಂಡುಬಂದಿದೆ.




