- ಉತ್ತಮ ಆರೋಗ್ಯ ಸಾಮರಸ್ಯ ಶಾಂತಿ ನೆಮ್ಮದಿಗಾಗಿ ಯೋಗಾಸನ ಪ್ರಾಣಾಯಾಮ ಹಾಗೂ ಧ್ಯಾನ ಪ್ರಮುಖ ಪಾತ್ರ : ಸಿ ಎಸ್ ಷಡಾಕ್ಷರಿ
ನಾವುಗಳು ಉತ್ತಮ ಆರೋಗ್ಯ ಸಾಮರಸ್ಯ ಶಾಂತಿ ನೆಮ್ಮದಿಗಾಗಿ. ಪ್ರತಿನಿತ್ಯ ಯೋಗ ಪ್ರಾಣಾಯಾಮ ಧ್ಯಾನ ಮಾಡಲೇಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರು ಅಭಿಮತ ವ್ಯಕ್ತಪಡಿಸಿದರು.
ಅವರು ಇಂದು ಶ್ರೀ ಶಿವಗಂಗಾ ಯೋಗ ಕೇಂದ್ರ. ಜಿಲ್ಲಾ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಶಮಾನೋತ್ಸವದ ಅಂಗವಾಗಿ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಸವನಗುಡಿಯಲ್ಲಿ ಹಮ್ಮಿಕೊಳ್ಳಲಾದ 15 ದಿನಗಳ ಉಚಿತ ಯೋಗಾಸನ ಪ್ರಾಣಯಾಮ ಹಾಗೂ ಧ್ಯಾನ ಮತ್ತು ಆರೋಗ್ಯ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು
ಒತ್ತಡದ ಪ್ರಪಂಚದಲ್ಲಿ ಯೋಗ ನಮ್ಮ ಮನಸ್ಸನ್ನು ನಿಯಂತ್ರಣದಲ್ಲಿರುತ್ತದೆ ಇಂದು ಚಿಕ್ಕ ಚಿಕ್ಕ ವಯಸ್ಸಿನಲ್ಲಿ ಹೃದಯದಿಂದ ಸಾಕಷ್ಟು ಜನ ನಿಧನರಾಗುತ್ತಿದ್ದಾರೆ ಈ ನಿಟ್ಟಿನಲ್ಲಿ ಆರೋಗ್ಯದ ಮುಂದೆ ಬೇರೆ ಯಾವ ಸಂಪತ್ತು ಇಲ್ಲ ಪ್ರತಿನಿತ್ಯ ನಾವು ಯೋಗ ಅಭ್ಯಾಸ ಮಾಡುವುದರ ಜೊತೆಗೆ ಉತ್ತಮ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು

ರಾಷ್ಟ್ರ ಪ್ರಶಸ್ತಿ ಹಾಗೂ ರಾಜುೋತ್ಸವ ಪ್ರಶಸ್ತಿ ಪುರಸ್ಕೃತರಾದ ಯೋಗಾಚಾರ್ಯ ಸಿವಿ ರುದ್ರಾರಾಧ್ಯ ರವರು ಶಿಬಿರದ ನೇತೃತ್ವವನ್ನು ವಹಿಸಿ ಮಾತನಾಡುತ್ತಾ ಯೋಗದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆಯ ಜೊತೆಗೆ ನಮ್ಮ ದೇಹದಲ್ಲಿ ಇರುವ ಸಣ್ಣ ಪುಟ್ಟ ಖಾಯಿಲೆಗಳು ನಮಗೆ ಗೊತ್ತಿಲ್ಲದ ಹಾಗೆ ಮಾಯವಾಗುತ್ತವೆ ಪ್ರತಿನಿತ್ಯ ಯೋಗ ಅಭ್ಯಾಸದಿಂದ ದೀರ್ಘಾಯುಷ್ಯ ಉಳ್ಳವರಾಗುತ್ತೇವೆ ಹಾಗೂ ಮುಖದಲ್ಲಿ ಸದಾ ಕಾಂತಿ ಇರುತ್ತದೆ ಈ ನಿಟ್ಟಿನಲ್ಲಿ ಪ್ರತಿ ಮನೆ ಮನೆಗಳಿಗೂ ಸಹ ಯೋಗವನ್ನು ತಲುಪಿಸುವ ನಿಟ್ಟಿನಲ್ಲಿ ಎಲ್ಲಾ ಬಡಾವಣೆಗಳಲ್ಲೂ ಸಹ ನಮ್ಮ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾದ ಎಸ್ ರುದ್ರೇಗೌಡರ ಮಾರ್ಗದರ್ಶನದ ಮುಖಾಂತರ ಎಲ್ಲಾ ಬಡಾವಣೆಗಳಲ್ಲೂ ಹಮ್ಮಿಕೊಳ್ಳಲು. ತೀರ್ಮಾನಿಸಲಾಗಿದೆ ಈ ನಿಟ್ಟಿನಲ್ಲಿ ಎಲ್ಲಾ ಬಡಾವಣೆ ನಿವಾಸಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು,
